*ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ : ಮುಖ್ಯಮಂತ್ರಿ*
*ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ : ಮುಖ್ಯಮಂತ್ರಿ*
ಕರ್ನಾಟಕ ಜನವರಿ 31: ಆರ್ಬಿಐ ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದ್ದು, ಜನರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ರಾಜ್ಯದ ಜನರಲ್ಲಿ ವಿನಂತಿಸುತ್ತೇನೆ.
ಮೈಕ್ರೋ ಫೈನಾನ್ಸ್ ನಿಂದ ಜನರಿಗಾಗುತ್ತಿರುವ ತೊಂದರೆ ನಮ್ಮ ಗಮನದಲ್ಲಿದೆ. ಜನರು ಸಾಲ ಲಭ್ಯವಾಗುವ ಕಡೆ ಸಾಲ ಪಡೆಯುತ್ತಿದ್ದಾರೆ. ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿಗಾರರು ನೀಡುವ ಸಾಲದ ಮೇಲೆ ಹೆಚ್ಚಿನ ಬಡ್ಡಿ ದರವನ್ನು ಹಾಕುವುದಲ್ಲದೇ, ಗೂಂಡಾಗಳ ಮೂಲಕ ಜನರನ್ನು ಹೆದರಿಸಿ, ಅಮಾನವೀಯ ರೀತಿಯಲ್ಲಿ ಸಾಲ ವಸೂಲಾತಿಯಲ್ಲಿ ತೊಡಗಿದ್ದಾರೆ. ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಾರ್ಷಿಕವಾಗಿ ಶೇ. 28 ರಿಂದ 30 ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಇದರಿಂದ ಸಾಲ ಪಡೆದ ಜನರು ಬೇಸತ್ತು, ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ಗಮನಿಸಲಾಗಿದೆ. ಮೈಕ್ರೋ ಫೈನಾನ್ಸ್ ವ್ಯವಸ್ಥೆಗಳು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ರಿಸರ್ವ್ ಬ್ಯಾಂಕ್ ನ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತವೆ. ಆದ್ದರಿಂದ ಮೈಕ್ರೋ ಫೈನಾನ್ಸ್ ನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸದ್ಯದಲ್ಲಿಯೇ ಸುಗ್ರೀವಾಜ್ಞೆಯನ್ನು ಹೊರಡಿಸಲಿದ್ದು, ಕಿರುಕುಳ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ.
- ಮೈಸೂರು ಹೆಲಿಪ್ಯಾಡ್ನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ
#karnataka #cm #state #jds #bjp #inc #minister #vidhanasoud #Bengaluru #ರಾಜ್ಯ #ಸಚಿವ #ಜಿಲ್ಲಾಧಿಕಾರಿ #ವರಿಷ್ಠಾಧಿಕಾರಿ #ಮುಖ್ಯಮಂತ್ರಿ #ಸಭೆ #ಕಾರ್ಯಕ್ರಮ #ಅಧ್ಯಕ್ಷ #ಸಮಿತಿ #ಪಂಚಾಯತ್ #ಪತ್ರಿಕೆ #ಮಾಧ್ಯಮ #ಒಕ್ಕಲಿಗ #Chethana #Muniswamygowda #Riya #YOGI #ಆದೇಶ #ಭಾಷೆ #ಚೇತನಾ #ಮುನಿಸ್ವಾಮಿಗೌಡ
https://whatsapp.com/channel/0029VacbYbeCMY0C0whFMu13
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಅಭಿಪ್ರಾಯಗಳಿಗೆ ಧನ್ಯವಾದಗಳು , ಸಧ್ಯದಲ್ಲೇ ಪ್ರತಿಕ್ರಿಯೆ ನೀಡಲಾಗುತ್ತದೆ.🙏