*ರಸ್ತೆಯನ್ನು ದುರಸ್ತಿಪಡಿಸಿ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಅನುವು ಮಾಡಿಕೊಡಲಾಗಿದೆ: ತುಮಕೂರು ಕಾರ್ಯಪಾಲಕ ಇಂಜಿನಿಯರ್‌*ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ,

*ರಸ್ತೆಯನ್ನು ದುರಸ್ತಿಪಡಿಸಿ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಅನುವು ಮಾಡಿಕೊಡಲಾಗಿದೆ:  ತುಮಕೂರು  ಕಾರ್ಯಪಾಲಕ ಇಂಜಿನಿಯರ್‌*

ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ, ಜನವರಿ 31.
ತುಮಕೂರು ಜಿಲ್ಲೆಯ ಹೆಬ್ಬೂರು ಹೋಬಳಿಯಲ್ಲಿನ ಗೋವಿಂದರಾಜಪುರ ಮಜರೆ ಶ್ರೀನಿವಾಸಪುರ ಗ್ರಾಮದ ಬಳಿ ಹಾದು ಹೋಗಿರುವ ಸಿರಿವರ ಮಲ್ಲಸಂದ್ರ ರಸ್ತೆಯು ಸಂಪೂರ್ಣ ಹಾಳಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದಾಗಿ ಅಲ್ಲಿನ ನಿವಾಸಿಯೊಬ್ಬರು ಇ-ಮೇಲ್‌ ಮೂಲಕ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗಕ್ಕೆ ದೂರು ನೀಡಿದ್ದರು. ತಕ್ಷಣವೇ ಸ್ಪಂದಿಸಿದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. 

ಅದರಂತೆ ರಸ್ತೆಯುದ್ದಕ್ಕೂ ಬಿದ್ದಿದ್ದ ಗುಂಡಿಗಳನ್ನು ಮುಚ್ಚುವ ಕಾಮಗಾರಿಯನ್ನು ಕೈಗೊಂಡಿದ್ದು, ರಸ್ತೆಯನ್ನು ದುರಸ್ತಿಪಡಿಸಿ ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಅನುವು ಮಾಡಿಕೊಡಲಾಗಿದೆ ಎಂದು ತುಮಕೂರು ಲೋಕೋಪಯೋಗಿ ಇಲಾಖೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ತಿಳಿಸಿದ್ದಾರೆ.#
Attack #accident #death #quarrel #sad #rip #terrific #kill #dragon #fever #virus #blast #terrist #theft #rowdy #ಸತ್ತ #ಸಾವು #ಹಸಿವು #ಕ್ರೂರ #crime #cruel #ಭಯಂಕರ #horror #horrible #fire #denger #rape #assault #ChethanaMuniswamygowda #beating ಚೇತನಾ #ಮುನಿಸ್ವಾಮಿಗೌಡ
https://cmkarnatakastate.blogspot.com/?m=1

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

*ನಾಟಿ ಕೋಳಿ ಸಾಕಾಣಿಕೆ ಎಲ್ಲ ವರ್ಗದ ಜನರ ಉದ್ಯಮ

*ರಾಹುಲ್ ಗಾಂಧಿ ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಬೆಂಬಲ ಹಿಂಪಡೆಯಲಿ- ದಿಗ್ವಿಜಯ್ ಸಿಂಗ್ ಸಹೋದರ ಒತ್ತಾಯ*

ಕಳ್ಳತನವಾದ100 ದ್ವಿಚಕ್ರ ವಾಹನಗಳು ಪತ್ತೆ :ಆಯುಕ್ತ ದಯಾನಂದ*