* ಎಲ್ಲಾ ಖಾಸಗಿ & ಸರ್ಕಾರಿ ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ತಡೆ ಸಮಿತಿ ಕಡ್ಡಾಯ
ಕರ್ನಾಟಕ ಮಾರ್ಚ.06: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಸಮಿತಿ (ಪಾಶ್ಚ) ಗಳನ್ನು ಜಿಲ್ಲೆಯ ಎಲ್ಲ ಸರಕಾರಿ ಅರೆ ಸರಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಸ್ಥಾಪಿಸಿ ಈ ಕುರಿತು ಜನಜಾಗೃತಿ ಮೂಡಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.video
ಜಿಲ್ಲಾದಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಮಹಿಳೆಯರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, 10 ಜನಕ್ಕಿಂತ ಹೆಚ್ಚು ಸಿಬ್ಬಂದಿಗಳು ಕಾರ್ಯನಿರ್ವಹಿಸುವ ಸ್ಥಳದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯಲು ಪಾಶ್ಚ ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕೆಂದು ಅವರು ತಿಳಿಸಿದರು.
ಈ ಕುರಿತಂತೆ ಈಗಾಗಲೇ ಸುಪ್ರಿಂ ಕೋರ್ಟ ಹಾಗೂ ಹೈಕೋರ್ಟ ಆದೇಶವಿದೆ. ಎಲ್ಲ ಸ್ಥಳಗಳಲ್ಲಿ ಮಹಿಳಾ ದೌರ್ಜನ್ಯ ತಡೆ ಸಮಿತಿಗಳನ್ನು ಸ್ಥಾಪಿಸುವುದರಿಂದ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆ ಹಿಡಿಯಬಹುದಾಗಿದೆ. ಈ ಕುರಿತು ಹೆಚ್ಚು ಪ್ರಚಾರ ಆಂದೋಲಗಳನ್ನು ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಧಿಕಾರಿಗಳಿಗೆ ಸೂಚಿಸಿದರು.
ತಾವು ಔರಾದ್‍ನಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಗೈರುಹಾಜರಾದ ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಳಿಗೆ ತರಾಟೆಗೆ ತೆಗೆದುಕೆಂಡ ಡಾ.ನಾಗಲಕ್ಷ್ಮೀ ಔರಾದ್‍ನಲ್ಲಿ ಅಲೆಮಾರಿ ಜನಾಂಗವು ತೀರ ಅಸಾಹನೀಯ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಅವರ ಅಭಿವೃದ್ಧಿಗೆ ಅಗತ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.
ಔರಾದ್‍ನ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಉತ್ತಮ ಆಹಾರ ಹಾಗೂ ಮೂಲಭೂತ ಸೌಕರ್ಯ ಒದಗಿಸುವಂತೆ ಸೂಚಿಸಿದರು. ಕಳೆದ 40 ವರ್ಷಗಳಿಂದ ಔರಾದ್ ನಗರದಿಂದ 8 ಕಿ.ಮೀ. ದೂರದಲ್ಲಿರುವ ಅಲೆಮಾರಿ ಸಮುದಾಯದವರಿಗೆ ಶಿಕ್ಷಣ, ಆರೋಗ್ಯ ಹಾಗೂ ಸಂಪರ್ಕಕ್ಕೆ ಅನುಕೂಲವಾಗುವಂತೆ ನಗರದ ಹಜತ್ತಿರದಲ್ಲಿ ಭೂಮಿ ಒದಗಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರೊಂದಿಗೆ ಚರ್ಚಿಸಿದರು. ಔರಾದ್‍ನ ತಾಲ್ಲೂಕ ಆಸ್ಪತ್ರೆಯ ಕುಡಿಯುವ ನೀರಿನ ಟ್ಯಾಂಕ್ ತೆರೆದಿದ್ದು ಹುಳಗಳು ಕಂಡುಬಂದಿದ್ದನ್ನು ಸರಿಪಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲ ಇಲಾಖೆಗಳ ಬಾಲಕಿಯರ ವಸತಿ ನಿಲಯಗಳ ನಿರ್ವಹಣೆ ಬಗ್ಗೆ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಆಹಾರ, ಆರೋಗ್ಯ, ಸ್ವಚ್ಛತೆ, ಭದ್ರತಾ ವ್ಯವಸ್ಥೆ ಕುರಿತು ಒಂದು ವಾರದಲ್ಲಿ ವರದಿ ಸಲ್ಲಿಸಬೇಕೆಂದು ಸೂಚಿಸಿದರು.
ಈ ಸಭೆಯಲ್ಲಿ ಜಿಲ್ಲಾದಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸಿಂಧು ಎಸ್., ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಶ್ರೀಧರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ, ಬ್ರಿಮ್ಸ್ ನಿರ್ದೇಶಕರಾದ ಶಿವಕುಮಾರ ಶೆಟಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜ್ಞಾನೇಶ್ವರ ನಿರುಗಡೆ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
*******
#karnataka #state #jds #bjp #minister #Bengaluru #ರಾಜ್ಯ #ಸಚಿವ #ಜಿಲ್ಲಾಧಿಕಾರಿ #ಅಧಿಕಾರಿ #ಮಂತ್ರಿ #ಸಭೆ #ಕಾರ್ಯಕ್ರಮ #ಅಧ್ಯಕ್ಷ #ಸಮಿತಿ #ಪಂಚಾಯತ್ #ಮಾಧ್ಯಮ #ಒಕ್ಕಲಿಗ #AI #Riya #YOGI #ಆದೇಶ #ಭಾಷೆ #ಚೇತನಾ #ಮುನಿಸ್ವಾಮಿ #ಗೌಡ
https://whatsapp.com/channel/0029VacbYbeCMY0C0whFMu13
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಅಭಿಪ್ರಾಯಗಳಿಗೆ ಧನ್ಯವಾದಗಳು , ಸಧ್ಯದಲ್ಲೇ ಪ್ರತಿಕ್ರಿಯೆ ನೀಡಲಾಗುತ್ತದೆ.🙏