ಪೋಸ್ಟ್‌ಗಳು

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ* ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ*

ಇಮೇಜ್
ಕರ್ನಾಟಕ ವಾರ್ತೆ ಮಾ.03: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.  ನೇಮಕಾತಿ ಆದೇಶ, ವೇತನ ಪತ್ರ, ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫ...