*ಆದಿಚುಂಚನಗಿರಿ ಮಹಾಸಂಸ್ಥಾನದ *ಜ್ಞಾನ ವಿಜ್ಞಾನ ತಂತ್ರಜ್ಞಾನ ಮೇಳ ಉದ್ಘಾಟನೆ ಕಾರ್ಯಕ್ರಮ* ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಭಾಗಿ*
*ಆದಿಚುಂಚನಗಿರಿ ಮಹಾಸಂಸ್ಥಾನದ *ಜ್ಞಾನ ವಿಜ್ಞಾನ ತಂತ್ರಜ್ಞಾನ ಮೇಳ ಉದ್ಘಾಟನೆ ಕಾರ್ಯಕ್ರಮ* ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಭಾಗಿ* ಕರ್ನಾಟಕ ಫೆಬ್ರವರಿ 19://ಜೈ ಶ್ರೀ ಗುರುದೇವ್// ದಿನಾಂಕ 19.02.2025 ಬುಧವಾರ ಬೆಳಿಗ್ಗೆ 10.30 ಗಂಟೆಗೆ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಬಿಜಿಎಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ *ಜ್ಞಾನ ವಿಜ್ಞಾನ ತಂತ್ರಜ್ಞಾನ ಮೇಳ ಉದ್ಘಾಟನೆ ಕಾರ್ಯಕ್ರಮ* ದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ *ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು* ದಿವ್ಯಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ *ಪರಮಪೂಜ್ಯ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಯವರು,* ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಎಲ್ಲಾ ಶಾಖೆ ಮಠದ ಪೂಜ್ಯ ಸ್ವಾಮೀಜಿಗಳವರು, ಕೃಷಿ ಸಚಿವರಾದ *ಎನ್.ಚಲುವರಾಯಸ್ವಾಮಿಯವರು,* ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಖ್ಯಾತ ವಿಜ್ಞಾನಿಗಳಾದ *ಡಾ.ಗೌತಮ್ ರಾಧಾಕೃಷ್ಣ ದೇಸಿರಾಜು ಅವರು,* ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ *ಶ್ರೀಮತಿ ಡಾ.ಶಾಲಿನಿ ರಜನೀಶ್ ಅವರು,* ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ *ರವಿಗಣಿಗ ಅವರು,* ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ.ಕುಮಾರ್ ಅವರು, ಮಂಡ್ಯ ಜಿಲ್ಲೆಯ ಮುಖ್...