* ಎಲ್ಲಾ ಖಾಸಗಿ & ಸರ್ಕಾರಿ ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ತಡೆ ಸಮಿತಿ ಕಡ್ಡಾಯ
ಕರ್ನಾಟಕ ಮಾರ್ಚ.06: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಸಮಿತಿ (ಪಾಶ್ಚ) ಗಳನ್ನು ಜಿಲ್ಲೆಯ ಎಲ್ಲ ಸರಕಾರಿ ಅರೆ ಸರಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಸ್ಥಾಪಿಸಿ ಈ ಕುರಿತು ಜನಜಾಗೃತಿ ಮೂಡಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು. video ಜಿಲ್ಲಾದಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಮಹಿಳೆಯರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, 10 ಜನಕ್ಕಿಂತ ಹೆಚ್ಚು ಸಿಬ್ಬಂದಿಗಳು ಕಾರ್ಯನಿರ್ವಹಿಸುವ ಸ್ಥಳದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯಲು ಪಾಶ್ಚ ಸಮಿತಿಗಳನ್ನು ಕಡ್ಡಾಯವಾಗಿ ರಚಿಸಬೇಕೆಂದು ಅವರು ತಿಳಿಸಿದರು. ಈ ಕುರಿತಂತೆ ಈಗಾಗಲೇ ಸುಪ್ರಿಂ ಕೋರ್ಟ ಹಾಗೂ ಹೈಕೋರ್ಟ ಆದೇಶವಿದೆ. ಎಲ್ಲ ಸ್ಥಳಗಳಲ್ಲಿ ಮಹಿಳಾ ದೌರ್ಜನ್ಯ ತಡೆ ಸಮಿತಿಗಳನ್ನು ಸ್ಥಾಪಿಸುವುದರಿಂದ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆ ಹಿಡಿಯಬಹುದಾಗಿದೆ. ಈ ಕುರಿತು ಹೆಚ್ಚು ಪ್ರಚಾರ ಆಂದೋಲಗಳನ್ನು ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಧಿಕಾರಿಗಳಿಗೆ ಸೂಚಿಸಿದರು. ತಾವು ಔರಾದ್ನಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಗೈರುಹಾಜರಾದ ಸಮಾಜ ಕಲ್ಯಾಣ ಅಧಿಕಾರಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಳಿಗೆ ತರಾಟೆಗೆ ತೆಗೆದುಕೆಂಡ ಡಾ.ನಾಗಲಕ್ಷ್ಮೀ ಔರಾದ್ನಲ್ಲಿ ಅಲೆಮಾರಿ ಜನಾಂಗವು ತೀರ ಅಸಾಹನೀಯ ಸ್ಥಿತಿಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಅವರ ಅಭಿವೃದ್ಧಿಗೆ ಅಗತ್ಯ ಕಾರ್ಯಕ್ರಮಗಳ...