*ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಂಜೂರು*
*ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಂಜೂರು* ******** ಬೆಂಗಳೂರು: ಮಾರ್ಚ್ 01:ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸ್ಥಾಪಿಸಬೇಕೆಂಬ ರೈತರ ಬಹುದಿನಗಳ ಬೇಡಿಕೆಯನ್ನು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಈಡೇರಿಸಿದ್ದು, ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಸಚಿವರ ಸೂಚನೆ ಮೇರೆಗೆ ಕೃಷಿ ಇಲಾಖೆಯಲ್ಲಿನ ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ನಿಯಮಿತ ಸಂಸ್ಥೆ (ಕೆಮಿಕ್) ಸಮಾಪನಗೊಳಿಸಿದಾಗ ಲಭ್ಯವಾದ ಜಂಟಿ ಕೃಷಿ ನಿರ್ದೇಶಕರ ಹುದ್ದೆಯನ್ನು ಪೂರಕ ಸಿಬ್ಬಂದಿಯೊಡನೆ ಜಂಟಿ ಕೃಷಿ ನಿರ್ದೇಶಕರು, ಬೆಂಗಳೂರು ಗ್ರಾಮಾಂತರ ಎಂದು ಮರುವಿನ್ಯಾಸಗೊಳಿಸಿ ಆದೇಶ ಹೊರಡಿಸಲಾಗಿದೆ. ಹುದ್ದೆಗಳ ವಿವರ:- ಬೆಂಗಳೂರು ಗ್ರಾಮಾಂತರ ಕೃಷಿ ಕಚೇರಿಗೆ ಜಂಟಿ ಕೃಷಿ ನಿರ್ದೇಶಕರು-1, ಸಹಾಯಕ ಕೃಷಿ ನಿರ್ದೇಶಕರು-2, ಕೃಷಿ ಅಧಿಕಾರಿ-3, ಸಹಾಯ ಆಡಳಿತಾಧಿಕಾರಿ-1, ಅಧೀಕ್ಷಕರು-1, ಪ್ರಥಮ ದರ್ಜೆ ಸಹಾಯಕರು-1, ದ್ವಿತೀಯ ದರ್ಜೆ ಸಹಾಯಕರು-2, ಬೆರಳಚ್ಚುಗಾರರು-1, ವಾಹನ ಚಾಲಕರು-2, ಗ್ರೂಪ್ ಡಿ-3 ಸೇರಿದಂತೆ 17 ಅಧಿಕಾರಿ ಸಿಬ್ಬಂದಿಗಳ ಹುದ್ದೆಗಳನ್ನು ಸೃಜಿಸಲಾಗಿದೆ. ಇದಲ್ಲದೇ 13 ಹುದ್ದೆಗಳನ್ನೊಳಗೊಂಡ ಬೆಂಗಳೂರು ಗ್ರಾಮಾಂತರ ಉಪ ಕೃಷಿ ನಿರ್ದೇಶಕರ ಕಚೇರಿ ಕೂಡಾ ಕಾರ್ಯನಿರ್ವಹಿಸಲಿದೆ. ಇದರಿಂದಾಗಿ ಒಟ್ಟು 30 ಅಧಿಕಾರಿ...