*ಜೂನ್ 3ರಂದೇ ಕಾಂಗ್ರೆಸ್ ಕಚೇರಿ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಆಲೋಚನೆ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್
*ಜೂನ್ 3ರಂದೇ ಕಾಂಗ್ರೆಸ್ ಕಚೇರಿ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಆಲೋಚನೆ: ಸಿಎಲ್ ಪಿ ನಾಯಕ ಡಿ.ಕೆ. ಶಿವಕುಮಾರ್* *ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಸಮಯ ನಿಗದಿ ಬಾಕಿ* *ಸಚಿವರ ಪ್ರಮಾಣ ವಚನ ಹೈಕಮಾಂಡ್ ತೀರ್ಮಾನ* *ಸಾರ್ವಜನಿಕರ ತೊಂದರೆ ನಿವಾರಣೆಗೆ ಲೋಕಭವನದಲ್ಲಿ ಪ್ರಮಾಣ ವಚನ* *ಬೆಂಗಳೂರು, ಮೇ 31:* "ಜೂನ್ 3ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿದ ಬಳಿಕ ರೇಸ್ ಕೋರ್ಸ್ ರಸ್ತೆ ಬಳಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನಡೆಸಲು ಆಲೋಚಿಸಲಾಗಿದ್ದು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಇನ್ನಷ್ಟೇ ಸಮಯ ನಿಗದಿ ಮಾಡಬೇಕಿದೆ" ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರೇಸ್ ಕೋರ್ಸ್ ರಸ್ತೆ ಬಳಿ ಉದ್ದೇಶಿತ ಕಾಂಗ್ರೆಸ್ ಭವನ ನಿರ್ಮಾಣ ಜಾಗಕ್ಕೆ ಭಾನುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. "ಪಕ್ಷದ ಎಲ್ಲಾ ಬ್ಲಾಕ್ ಹಾಗೂ ಜಿಲ್ಲಾ ಅಧ್ಯಕ್ಷರು, ಶಾಸಕರು ಹಾಗೂ ಮಾಜಿ ಶಾಸಕರು, ಪಕ್ಷದ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಸಂಸದರು, ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಿಗೆ ಆಹ್ವಾನ ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ. ಕಾರ್ಯಕರ್ತರು ಕ್ಷಮಿಸಬೇಕು. ಅಲ್ಲಿ ಜಾಗದ ಕೊರತೆ ಇರುವುದರಿಂದ ಆಹ್ವಾನಿತರಿಗೆ ಮಾತ್...