ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ. ಶಿವಕುಮಾರ್*
ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ. ಶಿವಕುಮಾರ್* Press byte at Vidhana Soudha @DKShivakumar #Congress #IndianNationalCongress #CongressParty #INCIndia #INC #ಡಿಕೆಶಿವಕುಮಾರ್ *ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ. ಶಿವಕುಮಾರ್* *ಯಾರ ಒತ್ತಡಕ್ಕೂ ಮಣಿಯಬೇಡಿ: ಕಾನೂನು ಚೌಕಟ್ಟಿನಲ್ಲಿ ಸಕಾರಾತ್ಮಕ ಮನೋಭಾವದಲ್ಲಿ ಕೆಲಸ ಮಾಡಿ* *ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳಬಾರದು* *ರಾಜ್ಯದಲ್ಲಿ ಸಿಎಸ್ಆರ್ ನಿಧಿ ಬಳಕೆ ಬಗ್ಗೆ ಮಾಹಿತಿ ಸಂಗ್ರಹ* *ರೌಡಿಗಳ ನಿಯಂತ್ರಣಕ್ಕೆ ತಾಲ್ಲೂಕು ಮಟ್ಟದಲ್ಲಿ ಪ್ರತ್ಯೇಕ ಪಡೆ ರಚಿಸಲು ಸೂಚನೆ* *ಬೆಂಗಳೂರು, ಜೂ.04* “ನಮ್ಮ ಸರ್ಕಾರದಲ್ಲಿ ಸಾರ್ವಜನಿಕರ ಕುಂದುಕೊರತೆ ಆಲಿಸಿ, ಸ್ಪಂದಿಸಲು ಹಾಗೂ ಅನಿವಾಸಿ ಭಾರತೀಯರಿಗಾಗಿ ಎರಡು ಪ್ರತ್ಯೇಕ ಸಚಿವಾಲಯಗಳನ್ನು ಆರಂಭಿಸಲಾಗುವುದು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮೇಲ್ಪಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅಪರ ಮುಖ್ಯ ಪ್ರಧಾನ ಸಂರಕ್ಷಣಾಧಿಕಾರಿಗಳು...