ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸ್ಕೌಟ್ ಕಾರ್ಯಕ್ರಮವನ್ನು ವಿಸ್ತರಿಸಿ: ಸಿಎಂ ಡಿ.ಕೆ. ಶಿವಕುಮಾರ್*
*ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸ್ಕೌಟ್ ಕಾರ್ಯಕ್ರಮವನ್ನು ವಿಸ್ತರಿಸಿ: ಸಿಎಂ ಡಿ.ಕೆ. ಶಿವಕುಮಾರ್* *ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗುವುದು ನಿಮ್ಮ ಗುರಿಯಾಗಲಿ* *ಬೆಂಗಳೂರು, ಜೂ.22:* “ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಸ್ಕೌಟ್ ಕಾರ್ಯಕ್ರಮವನ್ನು 3 ವರ್ಷಗಳಿಗೆ ಸೀಮಿತಗೊಳಿಸದೇ, ಇದನ್ನು ಹೆಚ್ಚಿನ ಅವಧಿಗೆ ವಿಸ್ತರಿಸಿ” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಸಲಹೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಮತ್ತು ಬ್ರಿಟಿಷ್ ಕೌನ್ಸಿಲ್ ಸಹಯೋಗದೊಂದಿಗೆ ಅತ್ಯುತ್ತಮ ಪ್ರತಿಭಾವಂತ ಪದವಿಪೂರ್ವ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ SCOUT-2.0 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಚಾಲನೆ ನೀಡಿ ಮಾತನಾಡಿದರು. “ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಭೇಟಿ ಮಾಡಿರುವುದಕ್ಕೆ ಸಂತೋಷವಾಗಿದೆ. ಕರ್ನಾಟಕ ಎಂದರೆ ಬೆಂಗಳೂರು ಮಾತ್ರವಲ್ಲ. ಚಾಮರಾಜನಗರದಿಂದ ಬೀದರ್ ವರೆಗೆ ಎಲ್ಲಾ ಗ್ರಾಮೀಣ ಪ್ರದೇಶದವರೆಗೆ ಎಲ್ಲಾ ಭಾಗದ ವಿದ್ಯಾರ್ಥಿಗಳು ಇದ್ದಾರೆ. ಎಲ್ಲಾ ವಿವಿಗಳು ಈ ಜವಾಬ್ದಾರಿ ವಹಿಸಿಕೊಂಡಿರುವುದು ಸಂತೋಷದ ವಿಚಾರ. ಬ್ರಿಟೀಷರು ಇಲ್ಲಿ ಆಳ್ವಿಕೆ ಮಾಡಿದ್ದರೂ ಅವರೊಂದಿಗೆ ಈ ಸಹಯೋಗ ಹಳೆಯದಾಗಿದೆ” ಎಂದರು. “ಜ್ಞಾನಗಳು, ಆಲೋಚನೆಗಳ ವಿನಿಮಯ ಮುಂದುವರಿಸುತ್ತಿದ್ದೇವೆ. ಈ ಕಾರ್ಯಕ್ರಮದ ಮೂಲಕ ಕರ್ನಾಟಕ ಸರ್ಕಾರದ ಜೊತೆ...